ನ್ಯೂಸ್ ನಾಟೌಟ್: ಐಪಿಎಸ್ ಅಧಿಕಾರಿ ಡಿ.ರೂಪ ಮಾಡಿರುವ ಆರೋಪ ಮತ್ತು ಕೆಲ ಖಾಸಗಿ ಫೊಟೋಗಳ ಕುರಿತಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ಈ ಬೆಳವನಿಗೆಗಲ ಮಧ್ಯೆ ಈ ಇಬ್ಬರು ಅಧಿಕಾರಿಗಳ ಜಗಳ ಇದೀಗ ಮತ್ತೊಂದು ರೂಪ ಪಡೆದಿದೆ. ಈ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡಿರುವ ರಾಜ್ಯ ಸರ್ಕಾರ ಇಬ್ಬರನ್ನೂ ಯಾವುದೇ ಸ್ಥಳ ತೋರಿಸದೆ ಎತ್ತಂಗಡಿ ಮಾಡಲಾಗಿದೆ. ಈ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಇಬ್ಬರು ಅಧಿಕಾರಿಗಳಿಗೂ ಲಿಖಿತ ವರ್ಗಾವಣಾ ಆದೇಶ ಮಾಡಿದ್ದಾರೆ.
ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಮೌದ್ಗಿಲ್ ಅವರಿಗೆ ಯಾವುದೇ ಹುದ್ದೆ ನೀಡದೆ ಮತ್ತು ಸ್ಥಳ ನಿಗದಿಪಡಿಸದೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಯಾಗಿದೆ.
ರಾಜ್ಯದಲ್ಲಿ ಇಬ್ಬರು ಉನ್ನತ ಮಹಿಳಾ ಅಧಿಕಾರಿಗಳು ಬಹಿರಂಗವಾಗಿ ಕಿತ್ತಾಡಿಕೊಂಡು, ಸರ್ಕಾರ ಮತ್ತು ಸರ್ಕಾರದ ಅಧಿಕಾರಿಗಳನ್ನು ಮುಜುಗರದ ತಂದಿರುವುದಕ್ಕೆ ಸರ್ಕಾರ ಅಸಮಧಾನ ಹೊರಹಾಕಿದೆ. ಅಲ್ಲದೆ ಇಬ್ಬರೂ ಆರೋಪ ಮತ್ತು ಪ್ರತ್ಯಾರೋಪಗಳನ್ನು ಸಾರ್ವಜನಿಕವಾಗಿ ಮಾಡದಿರಲು ಕಟ್ಟು-ನಿಟ್ಟಿನ ಆದೇಶ ಮಾಡಿದೆ.
ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಐಪಿಎಸ್ ಅಧಿಕಾರಿ ರೂಪ ಡಿ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿವರಣೆಯನ್ನು ಕೇಳಲು ಸಮನ್ಸ್ ಜಾರಿ ಮಾಡಿದ್ದರು.
- +91 73497 60202
- [email protected]
- November 22, 2024 8:18 PM