ನ್ಯೂಸ್ ನಾಟೌಟ್: ಮಂಗಳೂರಿನ ಪಳ್ನೀರ್ ಲಾಡ್ಜ್ ಒಂದರಲ್ಲಿ ರೂಮ್ ಬಾಡಿಗೆಗೆ ಪಡೆದಿದ್ದ ದಂಪತಿಯ ಮೃತದೇಹವು ನೇಣುಬಿಗಿದ ಸ್ಥಿತಿಯಲ್ಲಿ ಎರಡು ದಿನಗಳ ಬಳಿಕ ರೂಮ್ನಲ್ಲಿ ಪತ್ತೆಯಾಗಿದೆ.
ಮೃತ ದಂಪತಿಯನ್ನು ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಭ್ ನಿವಾಸಿಗಳಾದ ರವೀಂದ್ರ (55) ಮತ್ತು ಸುಧಾ (50) ಎಂದು ಗುರುತಿಸಲಾಗಿದೆ. ಫೆ. 6ರಂದು ಮಂಗಳೂರಿಗೆ ಬಂದಿದ್ದ ದಂಪತಿ ಲಾಡ್ಜ್ನಲ್ಲಿ ತಂಗಿದ್ದರು. ಕಳೆದ ಎರಡು ದಿನದಿಂದ ಹೊರ ಬಾರದ ಕಾರಣ ಲಾಡ್ಜ್ ಸಿಬ್ಬಂದಿ ಹೋಗಿ ಬಾಗಿಲು ತಟ್ಟಿದರು. ಯಾವುದೇ ಪ್ರತಿಕ್ರಿಯೆ ಇಲ್ಲದ ಕಾರಣ ಸಿಬ್ಬಂದಿಯು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಬಂದು ಬಾಗಿಲು ಒಡೆದು ನೋಡಿದಾಗ ಫ್ಯಾನ್ಗೆ ಲುಂಗಿ ನೇತು ಹಾಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಭೇಟಿ ನೀಡಿ ತನಿಖೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.