ಇದೇ ಮೊದಲ ಬಾರಿಗೆ ಮಲ್ಟಿಪಲ್ ಚಾಯ್ಸ್
ನ್ಯೂಸ್ ನಾಟೌಟ್: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ದಿನಾಂಕ ನಿಗದಿಯಾಗಿದ್ದು, ಮಾರ್ಚ್ 9ರಿಂದ 29 ರವರೆಗೆ ಪರೀಕ್ಷೆ ನಡೆಯಲಿದೆ. ಇದೇ ಮೊದಲ ಬಾರಿಗೆ ಪಿಯುಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಅವಕಾಶ ಇರಲಿದ್ದು, ಮಕ್ಕಳು ಪಾಸಾಗಲು 3 ಹಂತದ ಪ್ರಶ್ನೆಗಳು ಇರಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಮಂಗಳವಾರ ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ನಡೆದ ಸಭೆ ಬಳಿಕ ಮಾತನಾಡಿದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 5716 ಕಾಲೇಜುಗಳ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 1109 ಒಟ್ಟು ಪರೀಕ್ಷಾ ಕೇಂದ್ರಗಳು ಇರಲಿದೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳು ಯಾವುದೇ ಇಲೆಕ್ಟ್ರಾನಿಕ್ ವಸ್ತುಗಳನ್ನು ಒಯ್ಯುವಂತಿಲ್ಲ. ಪರೀಕ್ಷೆ ನಡೆಯುವ 15 ನಿಮಿಷ ಮುಂಚಿತವಾಗಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ಹಾಜರಿರಬೇಕು ಎಂದು ತಿಳಿಸಿದರು.