ನ್ಯೂಸ್ ನಾಟೌಟ್ : ಏಳನೇ ವೇತನ ಆಯೋಗದ ವರದಿ ಜಾರಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ರಾಜ್ಯಾದ್ಯಂತ ಸರ್ಕಾರಿ ನೌಕರರು ಇಂದಿನಿಂದ ಮುಷ್ಕರ ನಡೆಸುತ್ತಿದ್ದು,ನೌಕರರಿಗೆ ಇದೀಗ ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ.
ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗಿದ್ದು,ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶೇಕಡಾ 17 ವೇತನ ಹೆಚ್ಚಳಕ್ಕೆ ನಿರ್ಧರಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಬಸವರಾಜ್ ಬೊಮ್ಮಾಯಿ ಅವರು “ಎನ್ ಪಿಎಸ್ ವಿಚಾರ ಬೇರೆ ರಾಜ್ಯಗಳಲ್ಲಿ ಏನು ಆಗಿದೆ ಎಂಬುದರ ಬಗ್ಗೆ ವರದಿ ತರಿಸಿಕೊಳ್ಳುತ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ಮಾಡಿ ಎರಡು ತಿಂಗಳಲ್ಲಿ ವರದಿ ತರಿಸಿಕೊಳ್ಳುತ್ತೇವೆ” ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ “ ನಮಗೆ ಭರವಸೆಗಳು ಬೇಡ ಎಂದಿದ್ದಾರೆ. ಭರವಸೆ ಹಿಂದೆಯೂ ಕೊಟ್ಟಿದ್ದಾರೆ. ಪ್ರತಿ ಬಾರಿಯೂ ಭರವಸೆ ಕೊಟ್ಟರೆ ನಾವು ಕೇಳುವುದಿಲ್ಲ. ಆದೇಶ ಆದ ಮೇಲೆ ನಾವು ನಮ್ಮ ನಿರ್ಧಾರ ಹೇಳುತ್ತೇವೆ ಎಂದಿದ್ದಾರೆ. ಮುಂದುವರಿದು ಮಾತನಾಡಿದ ಅವರು ವಿಧಾನಸೌಧಕ್ಕೆ ಸದ್ಯ ಹೋಗುತ್ತಿದ್ದೇವೆ. ಆದೇಶ ಪ್ರತಿ ನೋಡಿ ಪ್ರತಿಕ್ರಿಯಿಸುತ್ತೇವೆ ಎಂದು ನೌಕರರ ಸಂಘದ ಕಚೇರಿ ಬಳಿ ಹೇಳಿದ್ದಾರೆ.