ನ್ಯೂಸ್ ನಾಟೌಟ್: ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಘೋಷಣೆಯಾಗಿಲ್ಲ. ಹಾಗಿರುವಾಗ ಮುಂಬರುವ ವಿಧಾನ ಸಭಾ ಚುನಾವಣೆಗೆ ಸುಳ್ಯ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವನ್ನು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜನಸಾರಿಗೆ ಸಚಿವ ಎಸ್. ಅಂಗಾರ ಹೇಳಿದರು.
ಕಡಬದಲ್ಲಿ ಮಾಧ್ಯಮದ ಜತೆ ಮಾತನಾಡಿದ ಸಚಿವರು, ನನ್ನ ರಾಜಕೀಯ ಜೀವನದಲ್ಲಿ ಈವರೆಗೆ ಸ್ಪರ್ಧೆಗಾಗಿ ಲಾಬಿ ನಡೆಸಿದವ ನಾನಲ್ಲ. ಪಕ್ಷ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಸುಳ್ಯ ಕ್ಷೇತ್ರದಲ್ಲಿ ನಿಷ್ಠೆಯಿಂದ ಜನರ ಸೇವೆ ಮಾಡಿದ ಕಾರಣ ಕ್ಷೇತ್ರದ ಜನರು ನಿರಂತರ ಆಶೀರ್ವಾದ ಮಾಡಿದ್ದಾರೆ. ಮುಂಬರುವ ಚುನಾವಣೆಯಲ್ಲೂ ಪಕ್ಷದ ನಿರ್ಧಾರದಂತೆ ನಡೆಯುತ್ತದೆ ಎಂದರು.