ನ್ಯೂಸ್ ನಾಟೌಟ್: ಬಿಸಿ ಗಾಳಿಯ ತಾಪಮಾನ ಏರುತ್ತಿದೆ. ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಡಲ ಅಬ್ಬರ ಹೆಚ್ಚಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.
ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಗಾಳಿಯೊಂದಿಗೆ ಮಂಗಳವಾರ ಗರಿಷ್ಠ ಉಷ್ಣಾಂಶ ಶೇ.35.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸಾಮಾನ್ಯ ತಾಪಮಾನಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದೆ. ಮುಂದಿನ ಮೂರ್ನಾಲ್ಕು ದಿನಗಳ ಕಾಲ ಇದೇ ರೀತಿ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ಬಿಸಿಗಾಳಿ ಹಿನ್ನಲೆಯಲ್ಲಿ ಮಾ.8ರಂದು ರಾತ್ರಿಯವರೆಗೆ ಸಮುದ್ರ ತೀರದಲ್ಲಿ 1.5 ಮೀ.ನಿಂದ 2.3 ಮೀ. ವರೆಗೆ ಅಲೆಗಳ ಅಬ್ಬರ ಇರುವ ಸಾಧ್ಯತೆ ಇದೆ. ಕಡಲ ತೀರದ ಜನತೆ ಮುಂಜಾಗ್ರತೆ ಕ್ರಮ ವಹಿಸುವಂತೆ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.