ನ್ಯೂಸ್ ನಾಟೌಟ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ ಆರ್ಟಿಸಿ) ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಮಾರ್ಚ್ 9ರಿಂದ 29ರವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದೆ.
ಅದರಂತೆ ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳ ಅನುಕೂಲಕ್ಕೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಪರೀಕ್ಷಾ ದಿನ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸುವುದು ಕಡ್ಡಾಯ ಹಾಗೂ ವಿದ್ಯಾರ್ಥಿಗಳು ಬಸ್ ಹತ್ತಲು ಮತ್ತು ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಕೆಎಸ್ಆರ್ ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸೂಚನೆ ನೀಡಿದ್ದಾರೆ.