ನ್ಯೂಸ್ ನಾಟೌಟ್: ಒಡಿಶಾ ಕಾಲೇಜು ಹಾಸ್ಟೆಲ್ನಲ್ಲಿ 3ನೇ ವರ್ಷದ ಪದವಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಒಡಿಶಾದ ಜಾಜ್ಪುರ ಜಿಲ್ಲೆಯ ಹಾಸ್ಟೆಲ್ ನಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹಾಸ್ಟೆಲ್ ಕೋಣೆಯಲ್ಲಿ 18 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ.
ಮೃತ ಮಹಿಳೆ ಮೂರನೇ ವರ್ಷದ ಪಾಲಿಟೆಕ್ನಿಕ್ ವಿದ್ಯಾರ್ಥಿನಿ ಎಂದು ಪೊಲೀಸರು ಪಿಟಿಐಗೆ ತಿಳಿಸಿದ್ದಾರೆ, ಆಕೆಯ ದೇಹವು ಕೋಣೆಯ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಮ್ಮ ಮಗಳ ಸಾವಿಗೆ ಕಾಲೇಜು ಆಡಳಿತ ಮಂಡಳಿಯೇ ಕಾರಣ ಎಂದು ಮಹಿಳೆಯ ಕುಟುಂಬ ಆರೋಪಿಸಿದ್ದಾರೆ.
ರ್ಯಾಗಿಂಗ್ ನಿಂದಾಗಿ “ಕಾಲೇಜಿನ ಪುರುಷ ವಿದ್ಯಾರ್ಥಿಯೊಬ್ಬ ನನ್ನ ಮಗಳಿಗೆ ಕ್ಯಾಂಪಸ್ ಪ್ಲೇಸ್ಮೆಂಟ್ಗೆ ಆಯ್ಕೆಯಾಗಿದ್ದಾಳೆ ಎಂದು ಸಂದೇಶ ಬಂದಿತ್ತು ತಕ್ಷಣ ಬರುವಂತೆ ಅದರಲ್ಲಿ ಹೇಳಲಾಗಿತ್ತು, ಆದರೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಅವಳನ್ನು ಕ್ಯಾಂಪಸ್ ಪ್ಲೇಸ್ಮೆಂಟ್ಗೆ ಹಾಜರಾಗಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದನು, ಇದರಿಂದ ಅವಳು ತುಂಬಾ ಭಯಗೊಂಡಿದ್ದಳು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅವಳು ಇನ್ನು ಮುಂದೆ ಹಾಸ್ಟೆಲ್ನಲ್ಲಿ ಉಳಿಯುವುದಿಲ್ಲ ಎಂದು ನಮಗೆ ತಿಳಿಸಿದಳು. ಮತ್ತೊಬ್ಬ ವಿದ್ಯಾರ್ಥಿ ನಿನ್ನೆ ಕೂಡ ಆಕೆಯನ್ನು ಥಳಿಸಲು ಯತ್ನಿಸಿದ್ದ ಎಂದುಪೋಷಕರೊಡನೆ ಹೇಳಿಕೊಂಡಿದ್ದಳು,” ಎಂದು ಆಕೆಯ ತಾಯಿ ಆರೋಪಿಸಿದ್ದಾರೆ. “ವಿದ್ಯಾರ್ಥಿಗಳ ಬೆದರಿಕೆಗೆ ಹೆದರಿ ನನ್ನ ಮಗಳು ಕಾಲೇಜು ಅಧಿಕಾರಿಗಳಿಗೆ ತಿಳಿಸಲಿಲ್ಲ” ಎಂದು ಅವರು ಹೇಳಿದರು. ಈ ಮಧ್ಯೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.