ನ್ಯೂಸ್ ನಾಟೌಟ್ : ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ಹಾಗೂ ಲಾರಿಗಳನ್ನು ಮತ್ತು ಮರಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಸೋಮನಾಥ ಉಳಿಯ ದೇವಸ್ಥಾನದ ಬಳಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿ ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿರುವ ಸುಮಾರು 10 ಲೋಡ್ ಮರಳು ಹಾಗೂ ಒಂದು ಹಿಟಾಚಿ ವಾಹನವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.