ನ್ಯೂಸ್ ನಾಟೌಟ್: ರಾಜ್ಯದ ಮೊದಲ ಜೀವವೈವಿಧ್ಯ ಔಷಧ ಉದ್ಯಾನ ಕೊಡಗಿನಲ್ಲಿ ನಿರ್ಮಾಣವಾಗುತ್ತಿದೆ. ಉದ್ಯಾನ ಕಾಮಗಾರಿಗೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಶಂಕುಸ್ಥಾಪನೆ ನೆರವೇರಿಸಿದ್ದಾರೆ.
ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಅರಣ್ಯ ಇಲಾಖೆ ವತಿಯಿಂದ ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ನಿರ್ಮಿಸಲು ಮಂಡಳಿ ಮುಂದಾಗಿದೆ.ಔಷಧೀಯ ಸಸ್ಯಗಳನ್ನು ಬೆಳೆಸಿ, ಅವುಗಳ ಮಹತ್ವವನ್ನು ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ತಿಳಿಸುವ ನಿಟ್ಟಿನಲ್ಲಿ 2.5 ಹೆಕ್ಟೇರ್ ಪ್ರದೇಶದಲ್ಲಿ ‘ಜೀವ ವೈವಿಧ್ಯ ಔಷಧ ಉದ್ಯಾನ’ ನಿರ್ಮಾಣವಾಗಲಿದೆ.
ಕಾರ್ಯಕ್ರಮವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು.ಈ ವೇಳೆ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ,ಕೊಡಗು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ನಿರಂಜನ ಮೂರ್ತಿ ಉಪಸ್ಥಿತರಿದ್ದರು.