ನ್ಯೂಸ್ ನಾಟೌಟ್ : ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಕೊಡಗಿನ ನಾಪೋಕ್ಲು ಸಮೀಪದ ಕೋಟೇರಿ ಬಳಿ ನಡೆದಿದೆ. ಚಾಲಕನ ಅಜಾರುಕತೆ ಹಾಗೂ ರಸ್ತೆ ನಿರ್ಮಾಣ ಸಂದರ್ಭ ತಡೆಗೋಡೆ ನಿರ್ಮಾಣ ಮಾಡದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಬಸ್ನಲ್ಲಿ ಶಾಲಾ ಮಕ್ಕಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರಾಗಿದ್ದು,ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಕ್ಕಬ್ಬೆಯಿಂದ ನಾಪೋಕ್ಲು ಮಾರ್ಗವಾಗಿ ಮಡಿಕೇರಿಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ,ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.ಘನಟಯಿಂದ ಭಯಭೀತರಾದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದರು.ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದು,ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆಯಾಗಿತ್ತು.