ನ್ಯೂಸ್ ನಾಟೌಟ್:ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಅಟ್ಟೂರು-ನಲ್ಲೂರು ಅರಣ್ಯ ಪ್ರದೇಶದಲ್ಲಿ ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ್ದ ಘಟನೆ ವರದಿಯಾಗಿದೆ. ಮಂಪರು ಮದ್ದು ನೀಡಿದ್ದ ಸುಮಾರು 20 ವರ್ಷದ ಕಾಡಾನೆ 35 ಅಡಿ ಆಳದ ಗುಂಡಿಗೆ ಬಿದ್ದು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.
ಈ ಪ್ರದೇಶದಲ್ಲಿ ಕಾಡಾನೆಯು ಜನರಿಗೆ ಭಾರಿ ಸಮಸ್ಯೆ ನೀಡುತ್ತಿದ್ದು, ಕಾಡಾನೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಮಂಪರು ಮದ್ದು ನೀಡಿದ ನಂತರ ಅಡ್ಡಾದಿಡ್ಡಿ ಓಡಲು ಆರಂಭಿಸಿದ ಆನೆಯು ಆಕಸ್ಮಿಕವಾಗಿ ಕಡಿದಾದ ಸಿಮೆಂಟ್ ಗುಂಡಿಗೆ ಬಿದ್ದು ಸಾವನ್ನಪ್ಪಿದೆ ಎಂದು ಅರಣ್ಯಾಕಾರಿಗಳು ತಿಳಿಸಿದ್ದಾರೆ.