ನ್ಯೂಸ್ ನಾಟೌಟ್: ಪಿಯು ವಿದ್ಯಾರ್ಥಿಯೊಬ್ಬ ಬಸ್ಸಿನಿಂದ ಎಸೆಯಲ್ಪಟ್ಟು ಮೆದುಳು ನಿಷ್ಕ್ರಿಯಗೊಂಡಿದ್ದ ಪರಿಣಾಮ ಪೋಷಕರು ಆತನ ಅಂಗಾಂಗ ದಾನ ಮಾಡಿದ್ದ ಬಗ್ಗೆ ಸುದ್ದಿಯಾಗಿತ್ತು. ಅಪಘಾತದಲ್ಲಿ ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಶಾಸಕ ಯು.ಟಿ.ಖಾದರ್ ಮುಖ್ಯಮಂತ್ರಿಯವರ ವಿಶೇಷ ಅನುದಾನ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ.
ಉಳ್ಳಾಲ ಮಾಸ್ತಿಕಟ್ಟೆ, ಬೈದೆರೆಪಾಲು ನಿವಾಸಿಗಳಾದ ತ್ಯಾಗರಾಜ್ ,ಮಮತಾ ಕರ್ಕೇರ ದಂಪತಿಯ ಪ್ರಥಮ ಪುತ್ರ ಯಶರಾಜ್(16) ಕಳೆದ ಸೆ.7 ರಂದು ಬೆಳಗ್ಗೆ ಉಳ್ಳಾಲದಿಂದ ಸಿಟಿ ಬಸ್ಸಲ್ಲಿ ಮಂಗಳೂರಿನ ಕಾಲೇಜಿಗೆ ಪಯಣಿಸುತ್ತಿದ್ದಾಗ ಬಸ್ಸಿಂದ ಹೊರಗೆಸೆಯಲ್ಪಟ್ಟಿದ್ದ ಘಟನೆ ನಡೆದಿತ್ತು. ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ಯಶರಾಜನ್ನು ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸೆ.13 ರಂದು ಮಧ್ಯಾಹ್ನ ಯಶರಾಜ್ ಮೆದುಳು ನಿಷ್ಕ್ರಿಯಗೊಂಡಿದ್ದನ್ನ ವೈದ್ಯರು ಘೋಷಿಸಿದ್ದು, ಪೋಷಕರ ನಿರ್ಧಾರದಂತೆ ಯಶರಾಜ್ ಅಂಗಾಂಗಗಳನ್ನ ದಾನ ಮಾಡಲಾಗಿತ್ತು. ಸಾವಿನಲ್ಲೂ ಸಾರ್ಥಕ್ಯ ಮೆರೆದ ಯಶರಾಜ್ ಮನೆಗೆ ಭೇಟಿ ನೀಡಿದ್ದ ಶಾಸಕ ಖಾದರ್ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ ಪರಿಹಾರ ಕೊಡಿಸುವುದಾಗಿ ಮಾತು ಕೊಟ್ಟಿದ್ದಲ್ಲದೆ ತನ್ನ ಆಪ್ತ ಸಹಾಯಕರ ಮೂಲಕವೇ ಎಲ್ಲಾ ದಾಖಲೆಗಳನ್ನ ಸರಕಾರಕ್ಕೆ ಸಲ್ಲಿಸಿದ್ದಾರೆ.
ಇದೀಗ ಯಶರಾಜ್ ತಂದೆ ತ್ಯಾಗರಾಜ್ ಅವರ ಬ್ಯಾಂಕ್ ಖಾತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಿಂದ 5 ಲಕ್ಷ ರೂಪಾಯಿ ಜಮೆ ಆಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ತ್ಯಾಗರಾಜ್ ಅವರು ನಮ್ಮಂತಹ ನೊಂದ ಕುಟುಂಬಕ್ಕೆ ಕೇಳದೇನೆ ಬಂದು ಪರಿಹಾರ ಒದಗಿಸಿ ಕೊಟ್ಟ ಶಾಸಕ ಖಾದರ್ ಅವರ ಸರಳತೆ, ಕಾಳಜಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
“ಅಂಗಾಂಗ ದಾನದ ಬಗ್ಗೆ ಜನಜಾಗೃತಿ ಮೂಡಿಸಬೇಕು. ಈ ಹಣ ಫಲಾನುಭವಿಗಲಿಗೆ ಸೇರಿದ್ದು ಸಂತೊಷ, ಜೊತೆಗೆ ಇತ್ತೀಚಿಗೆ ಕುತ್ತಾರಲ್ಲಿ ನಡೆದ ಅಪಘಾತದಲ್ಲಿ ಕಲ್ಲಾಪಿನ ಭೂಷಣ್ ರೈ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡು ಅಂಗಾಂಗ ದಾನ ಮಾಡಲಾಗಿತ್ತು. ಆತನ ಬಡ ಕುಟುಂಬಕ್ಕೂ ಸಹಾಯವಾಗುವ ನಿಟ್ಟಿನಲ್ಲಿ ಪರಿಹಾರಕ್ಕಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು ಶೀಘ್ರವೇ ಹಣ ಬಿಡುಗಡೆಯಾಗುವು” ಎಂದು ಖಾದರ್ ಮಾಹಿತಿ ನೀಡಿದ್ದಾರೆ.