ನ್ಯೂಸ್ ನಾಟೌಟ್: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.23 ರಂದು ಸಂಜೆ ಸುಬ್ರಹ್ಮಣ್ಯದ ಕಾಶಿಕಟ್ಟೆಯಲ್ಲಿ ಸಂಭವಿಸಿದೆ.
ಹಲವು ವರ್ಷಗಳಿಂದ ಸುಬ್ರಹ್ಮಣ್ಯದ ಕಾಶಿಕಟ್ಟಯಲ್ಲಿ ಲ್ಯಾಂಡ್ರಿ ಕೆಲಸ ನಡೆಸುತ್ತಿದ್ದ ವ್ಯಕ್ತಿ ಪರ್ವತಮುಖಿ ಬಳಿ ಇರುವ ತಮ್ಮ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಆತ್ಮಹತ್ಯೆ ಮಾಡಿಕೊಂಡವರು ಸುಜಿತ್ ಎಂಬ ವ್ಯಕ್ತಿ ಎಂದು ತಿಳಿದುಬಂದಿದ್ದು, ಇವರು ಮೂಲತಹ ಧರ್ಮಸ್ಥಳ ಬಳಿಯ ಕೊಕ್ಕಡದವರೆನ್ನಲಾಗಿದೆ.
ಸುಜಿತ್ ಅವರಿಗೆ 38 ವರ್ಷ ವಯಸ್ಸಾಗಿದ್ದು, ಮೃತರು ಪತ್ನಿ ಪಲ್ಲವಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಘಟನೆ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.