ನ್ಯೂಸ್ ನಾಟೌಟ್: ರಾಜ್ಯದ ಕೆಲವು ಕರಾವಳಿ ಜಿಲ್ಲೆಗಳಲ್ಲಿ ಮಾರ್ಚ್ 21ರಿಂದ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಬೀದರ್, ಬೆಳಗಾವಿ, ಬಾಗಲಕೋಟೆ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂಬುದಾಗಿ ಮುನ್ಸೂಚನೆ ನೀಡಿದೆ ಎಂದು ವರದಿ ತಿಳಿಸಿದೆ.
ಕಳೆದ ಭಾನುವಾರ ಮಾರ್ಚ್ ೧೯ ರಂದು ಮೈಸೂರು, ತುಮಕೂರು,ಉಡುಪಿ, ಬಳ್ಳಾರಿ, ಚಾಮರಾಜನಗರ ಜಿಲ್ಲೆಯ ಕೆಲವು ಭಾಗಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.