ನ್ಯೂಸ್ ನಾಟೌಟ್: ಆಕಸ್ಮಿಕವಾಗಿ ಎಂಟು ತಿಂಗಳ ಗಂಡು ಮಗು ಉಂಗುರ ನುಂಗಿ ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ಮಾರ್ಚ್ 23 ರಂದು ನಡೆದಿದೆ. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ಮುನೀರ್ ಎಂಬವರ ಮಗು ಬುಧವಾರ ರಾತ್ರಿ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ ಘಟನೆ ನಡೆದಿದೆ.
ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಯಿತಾದರೂ ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗಿನ ಜಾವ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.