ನ್ಯೂಸ್ ನಾಟೌಟ್: ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ನಾಯಿ ಮೇಲೆ ರೇಪ್ ಮಾಡಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಕಾಮುಕನನ್ನು ಪೊಲೀಸರು ಬಂಧಿಸಿದ್ದ ಘಟನೆ ಮಾಸುವ ಮುನ್ನವೇ ಇಂಥದೊಂದು ಕೃತ್ಯ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಪಾಟ್ನಾದಲ್ಲಿ ಬೀದಿ ನಾಯಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವ ಕಾಮುಕನೋರ್ವನ ದುಷ್ಕೃತ್ಯವೊಂದು ಮಾರ್ಚ್ 8ರಂದು ಹೋಳಿ ಹಬ್ಬದ ದಿನದಂದು ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣು ಮಕ್ಕಳ ಮೇಲೆ ಕೆಟ್ಟ ದೃಷ್ಟಿ ಬೀಳುತ್ತಿದ್ದ ಕಾಮುಕರ ಕಣ್ಣು ಇದೀಗ ಮೂಕ ಪ್ರಾಣಿಗಳ ಮೇಲೂ ಬಿದ್ದಿದ್ದು, ಈ ಘಟನೆಯಿಂದ ಇಡೀ ಮಾನವ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.
ಸಾರ್ವಜನಿಕ ಸ್ಥಳದಲ್ಲಿ ಕಾಮುಕನೋರ್ವ ಬೀದಿ ನಾಯಿಯ ಮೇಲೂ ಅತ್ಯಾಚಾರವೆಸಗುತ್ತಿರುವಾಗ ಅಲ್ಲೇ ಇದ್ದ ಸಾರ್ವಜನಿಕರು ವಿಡಿಯೋ ಮಾಡಿ ಜಾಲತಾಣದಲ್ಲಿ ಹಂಚಿದ್ದಾರೆ. ಅಲ್ಲದೇ ಈ ಕೃತ್ಯ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಳಿಕ ಫುಲ್ವಾರಿ ಷರೀಫ್ ಪೊಲೀಸ್ ಠಾಣೆಯಲ್ಲಿ ಎನ್ಜಿಒವೊಂದು ದೂರು ಸಲ್ಲಿಸಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಣಿ ಪ್ರಿಯರು ಹಾಗೂ ಪ್ರಾಣಿ ದಯಾ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಆರೋಪಿ ವಿರುದ್ಧ ವಿವಿಧ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಪತ್ತೆಗಾಗಿ ಬಲೆ ಬೀಸಿದ್ದಾರೆ.