ನ್ಯೂಸ್ ನಾಟೌಟ್: ಸುಳ್ಯದಲ್ಲಿ ಮಣ್ಣಿನಡಿಗೆ ಬಿದ್ದು ಸಂಭವಿಸಿದ ಮಹಾ ದುರಂತದಲ್ಲಿ ಶನಿವಾರ ಮಾರ್ಚ್ ೨೫ ಉತ್ತರ ಕರ್ನಾಟಕ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಸ್ಥಳಕ್ಕೆ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ| ವೀರಯ್ಯ ಹಿರೇಮಠ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮುಂಬರುವ ಚುನಾವಣಾ ಪೂರ್ವ ಸಿದ್ಧತೆಯ ಅಂಗವಾಗಿ ಸುಳ್ಯದ ಗಡಿ ಪ್ರದೇಶದ ಚೆಕ್ ಪೋಸ್ಟ್ ಗಳಿಗೆ ಹಾಗೂ ಚುನಾವಣಾ ಸಂದರ್ಭದಲ್ಲಿ ಬಂದೋಬಸ್ತ್ ಕಾರ್ಯಕ್ಕೆ ಬರಲಿರುವ ಅರೆ ಸೇನಾ ತುಕಡಿ ಸಿಬ್ಬಂದಿ ತಂಗಲಿರುವ ಕಾಂತಮಂಗಲ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯ ಮತ್ತು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ರವೀಂದ್ರ ಸಿ.ಎಂ., ಪೊಲೀಸ್ ಅಧಿಕಾರಿಗಳು, ಸಿಬಂದಿ ಉಪಸ್ಥಿತರಿದ್ದರು.