ನ್ಯೂಸ್ನಾಟೌಟ್: ವೇಶ್ಯಾವಟಿಕೆ ಅಡ್ಡೆ ಮೇಲೆ ಸುಳ್ಯ ಪೊಲೀಸರ ಸಮ್ಮುಖದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಸುಳ್ಯ ನಗರ ಕಾರ್ಯಕರ್ತರು ಬುಧವಾರ ಸಂಜೆ ಆರು ಗಂಟೆಗೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಲಾಡ್ಜ್ವೊಂದರಲ್ಲಿ ವೇಶ್ಯಾವಟಿಕೆ ನಡೆಯುತ್ತಿದೆ ಅನ್ನುವ ಖಚಿತ ಮಾಹಿತಿ ಮೇರೆಗೆ ಪೊಲೀಸರ ಜತೆಗೂಡಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಸುಳ್ಯ ನಗರ ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿದರು ಎಂದು ಮೂಲಗಳು ನ್ಯೂಸ್ ನಾಟೌಟ್ ಗೆ ತಿಳಿಸಿವೆ. ಇದೇ ವೇಳೆ ಇಪ್ಪತ್ತರೆಡರಿಂದ ಇಪ್ಪತ್ತಮೂರು ವಯಸ್ಸಿನ ಇಬ್ಬರು ಯುವತಿಯರು ಹಾಗೂ ಓರ್ವ ರೂಂ ಬಾಯ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಇಬ್ಬರು ಏಜೆಂಟರು ತಲೆ ಮರೆಸಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಸದ್ಯ ಇಬ್ಬರು ಬಂಧಿತರು ಸುಳ್ಯ ಪೊಲೀಸರ ವಶದಲ್ಲಿ ಇದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ನ್ಯೂಸ್ ನಾಟೌಟ್ ಪೊಲೀಸರ ಮಾಹಿತಿ ಕೇಳಿದಾಗ ಅದನ್ನು ಅಲ್ಲಗೆಳೆದಿದ್ದಾರೆ. ಪುತ್ತೂರು, ಕಡಬ ಮೂಲದ ಯುವತಿಯರನ್ನು ಬಳಸಿಕೊಂಡು ವೇಶ್ಯಾವಟಿಕೆಗೆ ಯತ್ನ ನಡೆಸಲಾಗುತ್ತಿತ್ತು ಎನ್ನಲಾಗುತ್ತಿದೆ. ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಪೊಲೀಸರೇ ನೀಡಬೇಕಿದೆ.