ನ್ಯೂಸ್ ನಾಟೌಟ್ :ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಜನರ ಪ್ರೀತಿಗೆ ಪಾತ್ರರಾಗಿದ್ದ,ಆಸ್ಪತ್ರೆಗೆ ಬರುವ ರೋಗಿಗಳಿಗೆ ವಿಶೇಷ ಕಾಳಜಿ ತೋರುತ್ತಿದ್ದ ಸುಳ್ಯ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಕೀಯ ತಜ್ಞರಾದ ಡಾ.ಹಿಮಕರ ಕೆ.ಎಸ್.ಅವರು ಸರಕಾರಿ ಸೇವೆಯಿಂದ ನಿವೃತ್ತರಾಗಿದ್ದಾರೆ.ಇವರು ಸತತ ೩೦ ವರ್ಷಗಳ ಕಾಲ ಸರಕಾರಿ ಸೇವೆ ಮಾಡಿ ಇದೀಗ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇವರ 6 ವರ್ಷಗಳ ಸೇವಾ ಅವಧಿ ಉಳಿದಿರುವಂತೆಯೇ ಸ್ವಯಂ ನಿವೃತ್ತಿ ಪಡೆದಿದ್ದಾರೆ.
ಡಾ.ಹಿಮಕರ ಅವರು 1993ರಲ್ಲಿ ವೈದ್ಯರಾಗಿ ಸರಕಾರಿ ಸೇವೆಗೆ ಸೇರಿದರು. ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ, ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ ಕೀರ್ತಿ ಇವರದು.ಬಳಿಕ ಕೆಎಂಸಿಯಲ್ಲಿ ವೈದ್ಯಕೀಯ ಪಿಜಿ ಪಡೆದರು. ಬಳಿಕ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿಯೂ ವೈದ್ಯರಾಗಿ ಸೇವೆ ಸಲ್ಲಿಸಿದರು.ಆ ನಂತರ ಸುಳ್ಯ ಸಾರ್ವಜನಿಕ ಆಸ್ಪತ್ರೆಗೆ ಬಂದು ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸಿ ಸೇವೆಯಲ್ಲಿಸುಳ್ಯ ಜನರ ಮನಸ್ಸನ್ನೇ ಗೆದ್ದಿದ್ದರು. ಕಳೆದ ಎರಡು ವರ್ಷಗಳ ಹಿಂದೆ ಅವರು ಸ್ವಯಂ ನಿವೃತ್ತಿ ಬಯಸಿ ಅರ್ಜಿ ಸಲ್ಲಿಸಿದ್ದು ಇದೀಗ ಸರಕಾರ ಅವರಿಗೆ ಸ್ವಯಂ ನಿವೃತ್ತಿ ನೀಡಿದೆ. ಸರಕಾರಿ ಸೇವೆಯಿಂದ ನಿವೃತ್ತರಾದರೂ ಸುಳ್ಯದ ಖಾಸಗಿ ಕ್ಲೀನಿಕ್ನಲ್ಲಿ ಜನರ ಸೇವೆಗೆ ಲಭ್ಯರಿರುತ್ತೇನೆ ಎಂದು ಡಾ.ಹಿಮಕರ ಅವರು ತಿಳಿಸಿದ್ದಾರೆ.