ನ್ಯೂಸ್ ನಾಟೌಟ್: ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಸ್ತಂಗತರಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಗುರುವಾರ ವಿಧಿವಶರಾಗಿದ್ದಾರೆ ಎಮದು ವರದಿ ತಿಳಿಸಿದೆ.
ಚನ್ನರಾಯಪಟ್ಟಣ ತಾಲೂಕಿನ ಶ್ರೀ ಕ್ಷೇತ್ರ ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಗಳು ಕಳೆದ 4 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಬೆಳಗ್ಗೆ ಭಂಡಾರ ಭವನದಲ್ಲಿ ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದರು.
ಕೂಡಲೇ ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿದ್ದು, ಅನಾರೋಗ್ಯ ಹೆಚ್ಚಾದ ಕಾರಣ ಅವರನ್ನು ಮಠದಿಂದ ಆಂಬ್ಯುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬೆಳ್ಳೂರು ಆಸ್ಪತ್ರೆ ಬೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸ್ವಸ್ಥಿ ಶ್ರಿ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿಯವರಿಗೆ ಅಪಾರ ಶಿಷ್ಯವರ್ಗವನ್ನು ಅಗಲಿದ್ದಾರೆ.