ನ್ಯೂಸ್ ನಾಟೌಟ್: ತಮಿಳುನಾಡು ರಾಜ್ಯ ರಾಜಕಾರಣದಲ್ಲಿ ಅಲ್ಲೋಲಕಲ್ಲೋಲ ಸೃಷ್ಠಿಯಾಗಿದೆ. ಬರೋಬ್ಬರಿ 13 ಬಿಜೆಪಿ ಮುಖಂಡರು ಪಕ್ಷ ತೊರೆದಿದ್ದಾರೆ. ಇದು ಅಲ್ಲಿ ನ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಗೆ ದೊಡ್ಡ ತಲೆನೋವು ಉಂಟುಮಾಡಿದೆ.
ಬಿಜೆಪಿ ವಿಭಾಗದ 13 ಪದಾಧಿಕಾರಿಗಳು ಪಕ್ಷ ತೊರೆದಿದ್ದಾರೆ. ಈ ಬಗ್ಗೆ ಜಿಲ್ಲಾಧ್ಯಕ್ಷ ಅನ್ಬರಸನ್ ಮಾತನಾಡಿ, ಹಲವು ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಹುದ್ದೆಗೆ ಆಕಾಂಕ್ಷಿಯಲ್ಲ ಎಂಬುದು ಜನರಿಗೆ ಗೊತ್ತಿದೆ. ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಅಸಹಜ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾನೆ ಎಂದಿದ್ದಾರೆ.