ಕುಡುಕ ಪ್ರಯಾಣಿಕನ ಅವಾಂತರ
ನ್ಯೂಸ್ ನಾಟೌಟ್: ಕುಡಿದ ಮತ್ತಿನಲ್ಲಿ ಪ್ರಯಾಣಿಕನೊಬ್ಬ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಘಟನೆ ನಡೆದಿದೆ. ಶುಕ್ರವಾರ ಬೆಳಗ್ಗೆ 7.56ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ 6E 308 ಸಂಖ್ಯೆಯ ಇಂಡಿಗೋ ವಿಮಾನ ಬೆಂಗಳೂರಿನತ್ತ ಹೋಗುವ ಸಂದರ್ಭದಲ್ಲಿ ಪ್ರಯಾಣಿಕನೊಬ್ಬ ಕುಡಿದ ಮತ್ತಿನಲ್ಲಿ ಹಾರಾಟದ ಮಧ್ಯೆಯೇ ವಿಮಾನದ ತುರ್ತು ಬಾಗಿಲು ತೆರೆಯಲು ಮುಂದಾಗಿದ್ದಾನೆ. ಇದನ್ನು ಗಮನಿಸಿದ ಸಿಬ್ಬಂದಿ ತಕ್ಷಣವೇ ಆತನನ್ನು ತಡೆದು ಸಂಭವಿಸಬಹುದಾದ ಅವಾಂತರವನ್ನು ತಪ್ಪಿಸಿದ್ದಾರೆ.
ಬಳಿಕ ಸಿಬ್ಬಂದಿ ವಿಮಾನದ ಕ್ಯಾಪ್ಟನ್ಗೆ ಮಾಹಿತಿ ನೀಡಿದ್ದು, ಪ್ರಯಾಣಿಕನಿಗೆ ಎಚ್ಚರಿಕೆ ನೀಡಲಾಯಿತು. ವಿಮಾನ ಮತ್ತು ಪ್ರಯಾಣಿಕರ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿದೆ. ಅಲ್ಲದೇ ಸಹ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತಂದ ಆರೋಪದಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿ ಬೆಂಗಳೂರಿಗೆ ಆಗಮಿಸಿದ ನಂತರ ಸಿಐಎಸ್ಎಫ್ಗೆ ಹಸ್ತಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.