ನ್ಯೂಸ್ ನಾಟೌಟ್ : ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರು ಯಾವುದೇ ಕಾರ್ಯಕ್ರಮಗಳಲ್ಲಿ ಒಟ್ಟಿಗಿರುವುದನ್ನು ನೀವು ಗಮನಿಸಿದ್ದೀರಿ.ಇದೀಗ ಇಳಿ ವಯಸ್ಸಿನ ತಾಯಿಯನ್ನು ನೋಡಿ ಕೊಂಡು ಅವರ ಪಾಡಿಗೆ ಅವರು ಕೃಷಿಕೆಲಸದಲ್ಲಿ ತೊಡಗಿಕೊಂಡಿದ್ದಾರೆ.
ಇದರ ಮಧ್ಯೆ ವಿನೋದ್ ರಾಜ್ ಅವರ ಮದುವೆ ಬಗ್ಗೆಯೂ ಆಗಾಗ ಪ್ರಸ್ತಾಪವಾಗುತ್ತಿರುತ್ತದೆ.ಈ ಹಿಂದೆ ಮಾಧ್ಯಮದವರು ಮದುವೆ ಬಗ್ಗೆ ಸಾಕಷ್ಟು ಬಾರಿ ಪ್ರಶ್ನೆಗಳನ್ನು ಎತ್ತಿದ್ದರು.ಈದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದೇಶಕರಾದ ಪ್ರಕಾಶ್ ರಾಜ್ ಮೆಹು ಅವರು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಬರೆದಿರುವ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ.
ವಿನೋದ್ ರಾಜ್ ಅವರಿಗೆ ಹೆಗಲೆತ್ತರಕ್ಕೆ ಬೆಳೆದ ಮಗನಿದ್ದು ಚೆನ್ನೈಯಲ್ಲಿ ಓದುತ್ತಿದ್ದಾನೆ. ವಿನೋದ್ ರಾಜ್ ಪತ್ನಿ ಮತ್ತು ಪುತ್ರ ಚೆನ್ನೈಯಲ್ಲಿ ವಾಸಿಸುತ್ತಿದ್ದಾರೆ. ಲೀಲಾವತಿಯವರ ಜೊತೆಗೆ ಕುಳಿತಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಅದರಲ್ಲಿ ಮಹಾಲಿಂಗ ಭಾಗವತರ್ ಅವರ ಪತ್ನಿ ಲೀಲಾವತಿ ಅಮ್ಮಾಳ್ ಎಂದು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ಈ ಫೋಟೋ ಸಿಕ್ಕಿ ನನಗೆ ಹಲವು ಸಮಯವಾಯಿತು. ಆದರೆ ಸೂಕ್ತ ದಾಖಲೆಗಳಿಗಾಗಿ ನಾನು ಕಾಯುತ್ತಿದ್ದೆ. ಇತ್ತೀಚೆಗೆ ನನಗೆ ಗೆಳೆಯರೊಬ್ಬರು ಚೆನ್ನೈಯಿಂದ ಈ ಅಂಕಪಟ್ಟಿ ಮತ್ತು ಆಸ್ತಿ ದಾಖಲೆ ಪತ್ರಗಳನ್ನು ಕಳಿಹಿಸಿಕೊಟ್ಟಿದ್ದಾರೆ. ಹೀಗಾಗಿ ಬಹಿರಂಗಪಡಿಸುತ್ತಿದ್ದೇನೆ ಎಂದು ನಿರ್ದೇಶಕ ಪ್ರಕಾಶ್ ರಾಜ್ ಮೆಹು ಬರೆದುಕೊಂಡಿದ್ದಾರೆ.ಈ ಪೋಸ್ಟ್ ಗೆ ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.