ನ್ಯೂಸ್ ನಾಟೌಟ್ : ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಂದು ತಿಳಿದು ಬಂದಿದೆ. ಇವರು ಠಾಣೆಯ ಮಹಡಿ ಮೇಲಿಂದ ಜಿಗಿಯಲು ಯತ್ನಿಸಿದ್ದಾರೆ.
ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ 2022ರಲ್ಲಿ ಗಲಾಟೆಯಾಗಿತ್ತು ಎನ್ನಲಾಗಿದೆ. ಈ ವಿಷಯಕ್ಕೆ ಇಬ್ಬರು ಅಕ್ಕ ತಂಗಿಯರು ದೂರು ನೀಡಲು ಮೂಡಿಗೆರೆ ಠಾಣೆಗೆ ಬಂದಿದ್ದ,ಈ ವೇಳೆ ಅಲ್ಲಿನ ಸುಜಾತಾ ಎಂಬ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ಶಿಲ್ಪ ವಿರುದ್ದ ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಒಂದು ವರ್ಷದಿಂದೀಚೆಗೆ ಶಿಲ್ಪ ನ್ಯಾಯಾಲಯಕ್ಕೆ ಮುಖ ಮಾಡಿರಲಿಲ್ಲ.ಈ ಹಿನ್ನಲೆ ಕೋರ್ಟ್ ಆಕೆಯ ವಿರುದ್ಧ ಸಮನ್ಸ್ ಜಾರಿ ಮಾಡಿತ್ತು. ಇದರಿಂದ ಇದೀಗ ಮಹಿಳೆ ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.