ನ್ಯೂಸ್ ನಾಟೌಟ್: ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಅಧಿಕೃತವಾಗಿ ಜೆಡಿಎಸ್ಗೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯಲ್ಲಿ ಸೀಟ್ ಸಿಗದ ಕಾರಣ ಜೆಡಿಎಸ್ ಸೇರಿದ್ದೇನೆ. ಶಿವಮೊಗ್ಗದಲ್ಲಿ ಶಾಂತಿ ನೆಲೆಸಲು ಜೆಡಿಎಸ್ನಿಂದ ಸ್ಪರ್ಧಿಸುತ್ತಿದ್ದು, ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ನನ್ನ ಮೂಲ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅದಕ್ಕೆ ನಾನು ಬದ್ಧ. ಪರಿಷತ್ ಸದಸ್ಯನಾಗಿ ಎಲ್ಲಾ ವರ್ಗದ ಪರವಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಲು ಆಗಿಲ್ಲ. ಹಾಗಾಗಿ ಕಾನೂನು ಸಿದ್ಧವಾಗುವ ಕೆಳಮನೆ ಪ್ರವೇಶ ಮಾಡಲು ನಿರ್ಧಾರ ಮಾಡಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.