ನ್ಯೂಸ್ ನಾಟೌಟ್ : ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ರಾತ್ರಿ ಎರಡು ಗುಂಪುಗಳ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದು ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಂದ ಘಟನೆ ವರದಿಯಾಗಿದೆ.
ಮೂಲಗಳ ಪ್ರಕಾರ, ಬಲಿಯಾದವರನ್ನು ಭಾಸ್ಕರ್ ಜೆಟ್ಟಿ ಎಂದು ಗುರುತಿಸಲಾಗಿದ್ದು, ಅವರು 4 ನೇ ವರ್ಷದ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು ಎನ್ನಲಾಗಿದೆ.
ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ವೇಳೆ ಶುಕ್ರವಾರ ರಾತ್ರಿ 9:00 ಗಂಟೆ ಸುಮಾರಿಗೆ ಈ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ. ಕೊಲೆಯ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.