ನ್ಯೂಸ್ ನಾಟೌಟ್: ಬಿಜೆಪಿ ಧಾರವಾಡ ಜಿಲ್ಲಾ ಬಿಜೆಪಿ ಯವ ಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬಾತನನ್ನು ಮಂಗಳವಾರ ಏಪ್ರಿಲ್ 18ರಂದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಧಾರವಾಡದಲ್ಲಿ ಈ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ಪ್ರವೀಣ ಕಮ್ಮಾರ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದು, ತಡ ರಾತ್ರಿ ಪ್ರವೀಣ್ ಹೊಟ್ಟೆಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ.
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಂತಾಪ ಸೂಚಿಸಿದ್ದು, ಪ್ರಹಲ್ಲಾದ್ ಜೋಶಿ ಅಂತಿಮ ದರ್ಶನ ಪಡೆದಿದ್ದಾರೆ. ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಆಸ್ಪತ್ರೆಯಲ್ಲೇ ದುರಂತ ಅಂತ್ಯ ಕಂಡಿದ್ದಾರೆ.
ಮಂಗಳವಾರ ತಡರಾತ್ರಿ ಕೆಲವು ಕಾರಣಗಳಿಗೆ ಯುವಕರ ಮಧ್ಯೆ ಜಗಳ ಸಂಭವಿಸಿದ್ದು, ಈ ಜಗಳ ಪ್ರವೀಣ ಅವರ ಕೊಲೆಯಲ್ಲಿ ಅಂತ್ಯವಾಗಿದೆ. ಜಗಳದಲ್ಲಿ ದುಷ್ಕರ್ಮಿಗಳು ಪ್ರವೀಣ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆ ನಡೆಯುತ್ತಿದ್ದಂತೆ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಪ್ರವೀಣ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.