ನ್ಯೂಸ್ ನಾಟೌಟ್ : ಚುನಾವಣಾ ಕಾವು ರಂಗೇರುತ್ತಿದೆ.ಬೆಳ್ತಂಗಡಿಯಲ್ಲಿ ಇಂದು ನಾಮಪತ್ರ ಸಲ್ಲಿಕೆಯ ಸಂಭ್ರಮ.ಕಾಂಗ್ರೆಸ್ ಮತ್ತು ಬಿಜೆಪಿ ಇಬ್ಬರೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪಕ್ಷಗಳ ಮಧ್ಯೆ ಸಂಘರ್ಷವುಂಟಾಗಿದೆ.
ಬೆಳ್ತಂಗಡಿ ಸಂತೆಕಟ್ಟೆ ಬಳಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕಾರಿನ ಗಾಜು ಹುಡಿ ಮಾಡಿದ ಘಟನೆ ನಡೆಯಿತು.ಬಿಜೆಪಿಯ ಹಾಲಿ ಶಾಸಕ ಹರೀಶ್ ಪೂಂಜಾ ಅವರು ಎರಡನೇ ಬಾರಿ ಆಯ್ಕೆ ಯಾಗಿದ್ದು, ಅವರ ವಿರುದ್ಧವಾಗಿ ಕಾಂಗ್ರೆಸ್ಸಿನ ಯುವ ನೇತಾರ ರಕ್ಷಿತ್ ಶಿವರಾಮ್ ಅವರು ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಉಭಯ ಪಕ್ಷಗಳು ನಾಮಪತ್ರ ಸಲ್ಲಿಸುವ ವೇಳೆ ಸಾವಿರಾರು ಕಾರ್ಯಕರ್ತರು ನೆರೆದಿದ್ದರು.
ಈ ವೇಳೆ ಜೈಕಾರ ಘೋಷಣೆ ಮಾಡುತ್ತಿದ್ದ ಹಾಗೆ ಮಾತಿನ ಚಕಮಕಿ ನಡೆದು ಉದ್ರಿಕ್ತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ಏರ್ಪಡಿಸಿದ್ದು ಪರಿಸ್ಥಿತಿಯನ್ನು ಹತೋಟಿಗೆ ತಂದಿದೆ.