ನ್ಯೂಸ್ ನಾಟೌಟ್: ಎಪ್ರಿಲ್ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಹಾಗು ಆದರ ಮುಂಚಿತವಾಗಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ ಹದ್ದಿನ ಕಣ್ಣಿಡಲು ಕಾನೂನು ಸುವ್ಯವಸ್ಥೆ ಪಾಲನೆಗಾಗಿ ರಾಜ್ಯದಾದ್ಯಂತ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ.
ಈ ಹಿನ್ನೆಲೆಯಲ್ಲಿ ದ ಕ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂದಿಸಿದ ಕರ್ತವ್ಯಗಳನ್ನು ನಿರ್ವಹಿಸಲು ಮೊದಲ ಹಂತದಲ್ಲಿ 4 ಸಿ.ಆರ್.ಪಿ.ಎಪ್ ಪಡೆ ಆಗಮಿಸಿದ್ದು ಸುಳ್ಯದ ಸೂಕ್ಷ್ಮ ಸ್ಥಳಗಳಲ್ಲಿ ಸಿ ಆರ್ ಪಿ ಎಫ್ ಮತ್ತು ಪೊಲೀಸ್ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಪಥಸಂಚಲನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
ಸುಳ್ಯ ನಗರದ ನಾವೂರು, ಜಟ್ಟಿಪಳ್ಳ, ಶ್ರೀರಾಮ್ ಪೇಟೆ, ವಿವೇಕಾನಂದ ಸರ್ಕಲ್, ಕುರುಂಜಿ ಬಾಗ್, ಹಾಗೂ ರಥ ಬೀದಿಯಲ್ಲಿ ಆಕರ್ಷಕ ಪಥಸಂಚಲನ ನಡೆಸಲಾಗಿದೆ.
ಪುತ್ತೂರು ವಿಭಾಗದ ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು. ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ ಸಿಎಂ, ಸುಳ್ಯ ಠಾಣಾ ಉಪನಿರೀಕ್ಷಕ ದಿಲೀಪ್, ತನಿಕ ವಿಭಾಗದ ಎಸ್ ಐ ಶಾಹಿದ್ ಆಫ್ರಿದಿ, ಸೇರಿದಂತೆ CRPF ಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.