ನ್ಯೂಸ್ ನಾಟೌಟ್ : ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಜಿಲ್ಲೆಯಲ್ಲಿ ಮುಕ್ತ , ನ್ಯಾಯ , ಶಾಂತಿಯುತ ಚುನಾವಣೆ ನಡೆಸುವ ಉದ್ದೇಶದಿಂದ ಪರವಾನಗಿ ಹೊಂದಿದ ಆಯುಧಗಳನ್ನು ಏಪ್ರಿಲ್ 13ರೊಳಗೆ ಪೊಲೀಸ್ ಠಾಣೆಯಲ್ಲಿ ಠೇವಣಿ ಇಡುವಂತೆ ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ. ಆರ್ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಜಿಲ್ಲಾಧಿಕಾರಿ ಹೊರಡಿಸಿದ ಆದೇಶ ಪ್ರಕಾರ ಜಿಲ್ಲೆಯಲ್ಲಿ ಬೆಳೆ ರಕ್ಷಣೆ ಮತ್ತು ಜೀವರಕ್ಷಣೆಗಾಗಿ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಸ್ಥಳೀಯ ಪೊಲೀಸ್ ರಾಣೆಯಲ್ಲಿ ಅಥವಾ ಅಧಿಕೃತ ಕೋವಿ ಮದ್ದುಗುಂಡು ವ್ಯಾಪಾರಸ್ಥರಲ್ಲಿ ಏ. 13ರೊಳಗೆ ಒಪ್ಪಿಸಿ ಜುಮಾ ಮಾಡಿದ ರಶೀದಿಗಳನ್ನು ಪೊಲೀಸ್ ಠಾಣೆಗೆ ನೀಡುವಂತೆ ಆದೇಶಿಸಿದ್ದಾರೆ. ಈ ಸೂಚನೆಯನ್ನು ಪಾಲಿಸದಿದ್ದಲ್ಲಿ ಸೂಕ್ತ ಕ್ರಮ ಹಾಗೂ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ, ಚುನಾವಣಾಧಿಕಾರಿ , ದಂಡಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.