ನ್ಯೂಸ್ ನಾಟೌಟ್: ಕೊರಟಗೆರೆ ತಾಲೂಕಿನ ಬೈರನಹಳ್ಳಿ ಕ್ರಾಸ್ ಬಳಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಮೇಲೆ ಕಲ್ಲು ತೂರಾಟ ನಡೆದಿದೆ.
ಕಲ್ಲೇಟಿನಿಂದಾಗಿ ಪರಮೇಶ್ವರ್ ಅವರ ತಲೆಗೆ ಗಾಯವಾಗಿದೆ. ತಕ್ಷಣ ಅವರನ್ನು ಸಮೀಪದ ಅಕ್ಕಿರಾಂಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿಗೆ ಕರೆದೊಯ್ಯಲಾಗಿದೆ.
ಪ್ರಚಾರದ ಸಮಯದಲ್ಲಿ ಕಾರ್ಯಕರ್ತರು ಡಾ.ಜಿ. ಪರಮೇಶ್ವರ್ ಅವರನ್ನು ಎತ್ತಿಕೊಂಡು ಹೂ ಮಳೆ ಸುರಿಸಿದ್ದಾರೆ. ಈ ವೇಳೆ ಅವುಗಳ ನಡುವೆ ತೂರಿಬಂದ ಕಲ್ಲೊಂದು ಪರಮೇಶ್ವರ್ ಅವರ ತಲೆಗೆ ಬಡಿದು ತೀವ್ರ ರಕ್ತಸ್ರಾವವಾಗಿದೆ.