ನ್ಯೂಸ್ ನಾಟೌಟ್ : ಉತ್ತರ ಪ್ರದೇಶದ ಕಾನ್ಪುರ ದೇಹತ್ ಪ್ರದೇಶದಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಇಬ್ಬರು ಅಪ್ರಾಪ್ತ ಮಕ್ಕಳನ್ನು ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ ಕೊಂದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕೊಲೆ ಮಾಡಿದ ನಂತರ ವ್ಯಕ್ತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಲಾಗಿದೆ. ಗುಜರಾತಿನ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಇಂದ್ರಪಾಲ್ ನಿಶಾದ್ ಎಂಬ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತನ ಪತ್ನಿ, ಮಗ ಮತ್ತು ಮಗಳು ಶನಿವಾರ ಸಂಜೆ ದೇಹದ ಮೇಲೆ ತೀವ್ರತರವಾದ ಗಾಯಗಳೊಂದಿಗೆ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ತಜ್ಞರನ್ನು ನಿಯೋಜಿಸಲಾಗಿದೆ, ಎರಡು ದಿನಗಳ ಹಿಂದೆ ಗುಜರಾತ್ನಿಂದ ಮನೆಗೆ ಮರಳಿದ ಇಂದ್ರಪಾಲ್ ನೇಣು ಬಿಗಿದುಕೊಳ್ಳುವ ಮೊದಲು ತನ್ನ ಹೆಂಡತಿ ಮತ್ತು ಮಕ್ಕಳನ್ನು ಹೊಡೆದು ಕೊಂದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಶುಕ್ರವಾರ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಲೈವ್ ವಿಡಿಯೋ ಮಾಡಿದ್ದು, ಅದರಲ್ಲಿ ತನ್ನ ಪತ್ನಿ ಪುರುಷನೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿದ್ದಾನೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.