ನ್ಯೂಸ್ ನಾಟೌಟ್: ಮಾ.31ರಿಂದ ಆರಂಭಗೊಂಡ ಪ್ರತಿಷ್ಠಿತ 16ನೇ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ನಟಿಯರಾದ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ಡ್ಯಾನ್ಸ್ ಮಾಡಿ ಜನರನ್ನು ರಂಜಿಸಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.
ಗುಜರಾತ್ ನ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸಂಜೆ 7.30ಕ್ಕೆ ಮೊದಲ ಪಂದ್ಯ ಆರಂಭವಾಗಿದೆ. ಇದಕ್ಕೂ ಮುನ್ನ ಸಂಜೆ 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಖ್ಯಾತ ನಟಿಯರಾದ ಮಿಲ್ಕಿ ಬ್ಯೂಟಿ ತಮನ್ನಾ- ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಭರ್ಜರಿ ನೃತ್ಯ ಮಾಡಿದ್ದಾರೆ.
ಸಾಮಿ ಸಾಮಿ, ಶ್ರೀವಲ್ಲಿ, ನಾಟು ನಾಟು ಹಾಡಿಗೆ ರಶ್ಮಿಕಾ ಮಂದಣ್ಣ ಐಪಿಎಲ್ ವೇದಿಕೆಯಲ್ಲಿ ಹೆಜ್ಜೆ ಹಾಕಿದ್ದು, ತಮಿಳಿನ ಟಮ್ ಟಮ್ ಹಾಡಿಗೆ ತಮನ್ನಾ ಕುಣಿದು ಕುಪ್ಪಳಿಸಿದ್ದಾರೆ. ಇವರಿಬ್ಬರ ಡ್ಯಾನ್ಸ್ ವಿಡಿಯೋ ಸೊಶೀಯಲ್ ಮಿಡೀಯಾದಲ್ಲಿ ವೈರಲ್ ಆಗುತ್ತಿದೆ.