ನ್ಯೂಸ್ ನಾಟೌಟ್ : ಕಳೆದ ಎರಡು ದಿನಗಳಿಂದ ಕಾಡಾನೆಯೊಂದು ಕಡಬ ತಾಲೂಕಿನ ಕೊಂಬಾರಿನ ಕೆಂಜಾಳ ಬಗ್ಪುಣಿ ಭಾಗದ ಹೊಳೆಯ ನೀರಿನಲ್ಲಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಕಂಡು ಬಂದಿತ್ತು.ಇದೀಗ ಮೃತಪಟ್ಟಿದ್ದು,ಮೃತದೇಹಪತ್ತೆಯಾಗಿದೆ.
ಕಾಡಾನೆ ಗುರುವಾರ (ಎ.27) ತಡರಾತ್ರಿ ಮೃತಪಟ್ಟಿದೆ. ಹೊಳೆಯಲ್ಲಿದ್ದಕಾಡಾನೆಗೆ ನಿಶ್ಶಕ್ತಿಯಿಂದಾಗಿ ಮೇಲೆ ಬರಲು ಸಾಧ್ಯವಾಗದೇ ಹೊಳೆಯಲ್ಲಿಯೇ ನಿಂತಿತ್ತು. ಆನೆಗೆ ಚಿಕಿತ್ಸೆ ನೀಡುವ ಉದ್ದೇಶದಿಂದ ಕಡಬದ ಪಶು ವೈದ್ಯಾಧಿಕಾರಿ ಡಾ| ಅಜಿತ್ ಹಾಗೂ ಹುಣಸೂರಿನಿಂದ ಅರಣ್ಯ ಇಲಾಖೆಯ ಪಶು ವೈದ್ಯ ಡಾ| ಮುಜೀಬ್ ಅವರನ್ನು ಸ್ಥಳಕ್ಕೆ ಕರೆಸಲಾಗಿತ್ತು.
ಆನೆಯನ್ನು ಪರಿಶೀಲಿಸಿದ ವೈದ್ಯರು ಅದಕ್ಕೆ ಸುಮಾರು 50 ವರ್ಷ ಪ್ರಾಯವಾಗಿದ್ದು, ಬಾಯಿಯಲ್ಲಿ ಗಾಯವಾಗಿರುವಂತಿದೆ ಎಂದಿದ್ದಾರೆ. ವಯಸ್ಸು ಮತ್ತು ಅನಾರೋಗ್ಯದ ಕಾರಣ ಅದಕ್ಕೆ ಸರಿಯಾಗಿ ಆಹಾರ ಸೇವಿಸಲು ಸಾಧ್ಯವಾಗುತ್ತಿಲ್ಲ. ಚಿಕಿತ್ಸೆ ನೀಡಬೇಕಾದರೆ ಅರಿವಳಿಕೆ ನೀಡಿ ಪ್ರಜ್ಞೆ ತಪ್ಪಿಸಬೇಕಿದೆ. ಆದರೆ ಅರಿವಳಿಕೆಯನ್ನು ತಡೆದುಕೊಳ್ಳುವಷ್ಟು ಸಾಮರ್ಥ್ಯ ಅದಕ್ಕಿಲ್ಲ. ನಿಶ್ಶಕ್ತವಾಗಿರುವುದರಿಂದಾಗಿ ಅರಿವಳಿಕೆ ಪ್ರಯೋಗ ಸಾಧ್ಯವಿಲ್ಲ ಎಂದರು.
ಇಂತಹ ಸ್ಥಿತಿಯಲ್ಲಿ ಅರಿವಳಿಕೆ ಪ್ರಯೋಗಿಸಿದರೆ ಅದರ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಹೆಚ್ಚಿದೆ.ಆನೆ ಸಂಜೆ ವೇಳೆಗೆ ಬಾರಿ ಕಷ್ಟುಪಟ್ಟು ಹೊಳೆಯಿಂದ ಮೇಲಕ್ಕೆ ಬಂದು ಅರಣ್ಯದೊಳಕ್ಕೆ ಹೋಗಿತ್ತು. ಆದರೆ ಶುಕ್ರವಾರ ಬೆಳಗ್ಗೆ ಬಗ್ಪುಣಿಯಲ್ಲಿ ಆನೆಯ ಮೃತ ಶರೀರ ಪತ್ತೆಯಾಗಿದೆ.ಅದರ ವಿಡಿಯೋ ಇಲ್ಲಿದೆ ವೀಕ್ಷಿಸಿ..