ನ್ಯೂಸ್ ನಾಟೌಟ್: ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಧ ಘಟನೆ ಪುತ್ತೂರಿನಿಂದ ವರದಿಯಾಗಿದೆ. ಮರ್ಯಾದೆಗೆ ಅಂಜಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದ್ದು,ಮೃತ ವ್ಯಕ್ತಿಯನ್ನು ವಜ್ರಮೂಲೆ ದಿ. ಕೊರಗರವರ ಪುತ್ರ 50 ವರ್ಷದ ಶೀನಪ್ಪ ಎಂದು ಗುರುತಿಸಲಾಗಿದೆ.
ಶೀನಪ್ಪ ಎಂಬವರಿಗೆ ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಅಕ್ರಮ ಸಂಬಂಧವಿದೆ ಎನ್ನುವ ಸುದ್ದಿ ಬಹಿರಂಗವಾದ ಹಿನ್ನೆಲೆ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ತನ್ನ ಗಂಡನ ಜೊತೆ ಯಾಕೆ ಮಾತನಾಡುತ್ತೀಯಾ ಎಂದು ನೆರೆಮನೆಯ ಮಹಿಳೆಗೆ ಶೀನಪ್ಪ ಪತ್ನಿ ಕೇಳಿದ್ದಾರೆ. ಈ ವೇಳೆ ಅಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಗಲಾಟೆ, ಕೂಗಾಟ ಜೋರಾಗಿದೆ. ಏನೆಂದು ನೋಡಲು ಶೀನಪ್ಪ ಅಲ್ಲಿಗೆ ಬಂದಿದ್ದು, ಈ ವೇಳೆ ತನ್ನ ಪತ್ನಿ ಜೊತೆ ಮಾತಿನ ಚಕಮಕಿ ನಡೆದಿದೆ. ಅಲ್ಲದೆ ಪತ್ನಿಗೆ ಹೊಡೆಯಲು ಮುಂದಾಗಿದ್ದಾನೆ. ಈ ವೇಳೆ ಪಕ್ಕದ ಮನೆಯ ಮಹಿಳೆ ಇದನ್ನು ತಡೆದಿದ್ದಾಳೆ ಎಂದು ತಿಳಿದು ಬಂದಿದೆ.
ಈ ಘಟನೆಯಿಂದ ಕೋಪಗೊಂಡಿದ್ದ ಶೀನಪ್ಪ ನಿನ್ನೆ ರಾತ್ರಿ ಮನೆಯಿಂದ ಹೊರಹೋಗಿದ್ದಾರೆ. ರಾತ್ರಿ 10 ಗಂಟೆಯಾದರು ಪತಿ ಮನೆಗೆ ಬಾರದಿದ್ದರಿಂದ ಸಂಶಯಗೊಂಡು ಹುಡುಕಾಡಲು ಮುಂದಾಗಿದ್ದಾರೆ. ಈ ವೇಳೆ ತಮ್ಮ ತೋಟದ ಪಕ್ಕದಲ್ಲಿರುವ ಮಾವಿನ ಮರದ ಬಳಿ ಹೋಗಿ ನೋಡಿದಾಗ ಶೀನಪ್ಪ ಆತ್ಮಹತ್ಯೆಗೆ ಶರಣಾಗಿದ್ದಾನೆ.ಈ ಸಂಬಂಧ ಶೀನಪ್ಪ ಪತ್ನಿ ದೂರು ನೀಡಿದ್ದು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.