ನ್ಯೂಸ್ ನಾಟೌಟ್: ಕೇರಳದ ಕೋಳಿಕ್ಕೋಡ್ ರೈಲಿಗೆ ಬೆಂಕಿ ಹಚ್ಚಿದ ಘಟನೆಯ ಸಂಬಂಧ ಶಂಕಿತನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಎಟಿಎಸ್ ಮತ್ತು ಕೇರಳ ಪೊಲೀಸರ ಜಂಟಿ ತಂಡವು ಮಹಾರಾಷ್ಟ್ರದ ರತ್ನಗಿರಿಯಲ್ಲಿ ಆರೋಪಿಯನ್ನು ಬುಧವಾರ ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.
ಶಾರುಕ್ ಎಂಬಾತ ಬಂಧಿತ ವ್ಯಕ್ತಿ ಎನ್ನಲಾಗಿದ್ದು, ರೈಲಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆಯಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದರು, ದಾಳಿಯ ಹಿಂದಿನ ಉದ್ದೇಶವು ವಿಚಾರಣೆಯ ಬಳಿಕ ಬಯಲಾಗಲಿದೆ.
ಆದರೆ ಕೋಳಿಕ್ಕೋಡ್ ಜಿಲ್ಲೆಯ ಎಲತ್ತೂರ್ ಬಳಿ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದ ವಾಗ್ವಾವಾದದ ನಂತರ ಪ್ರಯಾಣಿಕರಿಗೆ ಬೆಂಕಿ ಹಚ್ಚಿರುವುದಾಗಿ ಶಂಕಿತನು ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಭಾನುವಾರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದ್ದು, ರೈಲಿನ ಡಿ1 ಕಂಪಾರ್ಟ್ ಮೆಂಟ್ನೊಳಗೆ ಪ್ರಯಾಣಿಕರೊಬ್ಬರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಇದರಿಂದ ಪ್ರಯಾಣಿಕರು ಭಯಭೀತರಾಗಿದ್ದರು. ಬೆಂಕಿ ಬಹುಬೇಗನೆ ಆಸನಗಳು ಮತ್ತು ಲಗೇಜ್ ಗಳಿಗೆ ಹರಡಿತು, ಕೋಚ್ ಗೆ ಬೆಂಕಿ ಆವರಿಸಿತ್ತು. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಸುಟ್ಟ ಗಾಯಗಳಾಗಿವೆ. ಇವರಲ್ಲಿ ಐವರನ್ನು ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿಗೆ ಮತ್ತು ಮೂವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರಲ್ಲಿ ಕನಿಷ್ಠ ಮೂವರು ಮಹಿಳೆಯರಿದ್ದಾರೆ. ಭಾರತದಲ್ಲಿ ಭಯೋತ್ಪಾದನೆ ಸಂಬಂಧಿತ ಪ್ರಕರಣಗಳ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಕಣ್ಣೂರು ನಿಲ್ದಾಣದಲ್ಲಿ ರೈಲು ಕೋಚ್ ಗಳನ್ನು ಪರೀಕ್ಷಿಸಿ ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಪ್ರಕರಣದ ತನಿಖೆಗಾಗಿ ಕೇರಳ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದರು ಮತ್ತು ಶಂಕಿತನ ಬಗ್ಗೆ ಸುಳಿವು ನೀಡಿದವರಿಗೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದರು, ಈಗ ಪೊಲೀಸರೇ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ವಿಚಾರಣೆ ನಡೆಸುತ್ತಿದ್ದಾರೆ.