ನ್ಯೂಸ್ ನಾಟೌಟ್: ಮಂಗಳೂರಿನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ. ಮಂಗಳೂರಿನ ನೆಹರೂ ಮೈದಾನದ ಬಳಿಯ ಫುಟ್ಬಾಲ್ ಮೈದಾನದಲ್ಲಿ ಮೃತದೇಹ ಪತ್ತೆಯಾಗಿದೆ. ಅವರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಅಮ್ಮುಂಜೆ ಯಾದವ ನಿವಾಸದ ಜನಾರ್ದನ ಪೂಜಾರಿ (45) ಮೃತ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.
‘ಮೃತದೇಹದಲ್ಲಿ ಯಾವುದೇ ಗಾಯಗಳು ಪತ್ತೆಯಾಗಿಲ್ಲ. ಜನಾರ್ದನ ಅವರ ಜತೆ ನಾಲ್ವರು ಜಗಳವಾಡಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ’ ಎಂದು ಪೋಲಿಸರು ಮಾಹಿತಿ ನೀಡಿದ್ದಾರೆ.