ನ್ಯೂಸ್ ನಾಟೌಟ್: ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 27ಕ್ಕೆ ಗುರುವಾರ ಬೆಳ್ಳಾರೆಯ ನೆಟ್ಟಾರಿನಲ್ಲಿ ಗೃಹ ಪ್ರವೇಶ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ.
ಶ್ರೀಗಣಪತಿ ಹೋಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಗೃಹ ಪ್ರವೇಶ ನೆರವೇರಲಿದೆ. ಇದೇ ವೇಳೆ ಬೆಳಗ್ಗೆ 11 ಗಂಟೆಗೆ ಪುತ್ತೂರು ಜಗದೀಶ ಆಚಾರ್ಯ ಮತ್ತು ಬಳಗದವರಿಂದ ಭಜನಾ ಸಂಕೀರ್ತನೆ ಹಾಗೂ ಅದೇ ದಿನ ರಾತ್ರಿ 7 ರಿಂದ ಶ್ರೀ ಕಲ್ಲುರ್ಟಿ ದೈವದ ನೇಮೋತ್ಸವವೂ ನಡೆಯಲಿದೆ ಎಂದು ತಿಳಿಸಲಾಗಿದೆ.