ನ್ಯೂಸ್ ನಾಟೌಟ್ : ಹುಲಿ ಯೋಜನೆಯ 50ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಂಡೀಪುರ ರಾಷ್ಟ್ರೀಯ ಉದ್ಯಾನವನ ತಲುಪಿದ್ದಾರೆ. ಮೈಸೂರಿನಿಂದ ಹೆಲಿಕ್ಯಾಪ್ಟರ್ ಮೂಲಕ ಬೆಳಗ್ಗೆ 7:20ರ ಸುಮಾರಿಗೆ ಮೇಲುಕಾಮನಹಳ್ಳಿಗೆ ಆಗಮಿಸಿದ ಪ್ರಧಾನಿ ಮೋದಿ, ಭಾರಿ ಭದ್ರತೆಯೊಂದಿಗೆ ಹೆಲಿಪ್ಯಾಡ್ ನಿಂದ ರಸ್ತೆ ಮೂಲಕ ಬಂಡೀಪುರಕ್ಕೆ ತೆರಳಿದರು.
ಅಲ್ಲಿಂದ ಸಫಾರಿಗೆ ಹೊರಟರು. ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಸಫಾರಿ ನಡೆಸಲಿದ್ದು, ವಾಯುಸೇನೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಬಂಡೀಪುರಕ್ಕೆ ಆಗಮಿಸಿದರು.
ಮೋದಿ ಅವರನ್ನು ಹಿರಿಯ ಅರಣ್ಯಾಧಿಕಾರಿಗಳಾದ ಡಿಡಿಜಿ ಸುಬ್ರಹ್ಮಣ್ಯ ಹಾಗೂ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಐಜಿಪಿ ಮುರಳಿ ಸ್ವಾಗತಿಸಿದರು ಎಂದು ವರದಿ ತಿಳಿಸಿದೆ.