ನ್ಯೂಸ್ ನಾಟೌಟ್: ಜೀವನದಲ್ಲಿಇನ್ನೂ ಹಲವು ವರ್ಷಗಳ ಕಾಲ ಸುಖವಾಗಿ ಬದುಕಿ ಬಾಳಬೇಕಿದ್ದ 15 ವರ್ಷದ ಹುಡುಗನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳ್ತಂಗಡಿಯಿಂದ ವರದಿಯಾಗಿದೆ.
ಬೆಳ್ತಂಗಡಿ ಶಿಕ್ಷಣ ಇಲಾಖೆಯ ದ್ವಿತೀಯ ದರ್ಜೆ ಸಹಾಯಕಾಗಿರುವ ಮಂಜುಳ ಅವರ ತಂಗಿ ಭಾಗ್ಯಮ್ಮ ಅನ್ನುವವರ ಮಗ ಶಿವ ಪ್ರಸಾದ್ ಸರಕಾರಿ ವಸತಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪರಿಸ್ಥಿತಿಯಲ್ಲಿ ಪತ್ತೆಯಾಗಿದೆ. ಮಂಜುಳಾ ಅವರು ಕೆಲಸದಿಂದ ಮನೆಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಪರಿಶೀಲನೆ ನಡೆಸುತ್ತಿದ್ದಾರೆ.