ನ್ಯೂಸ್ ನಾಟೌಟ್:ತೀವ್ರ ಹೊಟ್ಟೆ ನೋವಿನ ಕಾರಣದಿಂದ ನೆರೆಕರೆ ಮನೆಯ ಸ್ನೇಹಿತೆಯರಿಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.ಪ್ರತ್ಯೇಕ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಚಿಕಿತ್ಸೆ ಫಲಿಸದೆ ಇಬ್ಬರೂ ಸಾವನ್ನಪ್ಪಿದ ಘಟನೆ ಎಪ್ರಿಲ್ 6ರಂದು ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಸಮೀಪದ ಪಟ್ರಮೆ ಗ್ರಾಮದ ಪಟ್ಟೂರಿನ ಬಾಬು ಹಾಗೂ ಗೀತ ದಂಪತಿಗಳ ಪುತ್ರಿ ರಕ್ಷಿತಾ (22) ಮತ್ತು ಆಕೆಯ ನೆರೆಮನೆಯ ಶ್ರೀನಿವಾಸ ಆಚಾರಿ ಹಾಗೂ ಪಾರ್ವತಿ ದಂಪತಿಗಳ ಪುತ್ರಿ ಲಾವಣ್ಯ (20) ಮೃತಪಟ್ಟ ಯುವತಿಯರು ಎಂದು ಗುರುತಿಸಲಾಗಿದೆ.ಇಬ್ಬರೂ ಕೂಡ ಕಳೆದೊಂದು ವರ್ಷದಿಂದ ಅನಾರು ಹಾಗೂ ಮುಂಡೂರುಪಳಿಕೆ-ಉಪ್ಪಾರಪಳಿಕೆ ವಲಯದ ಸೇವಾ ನಿರತೆಯರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ಇನಲಾಗಿದೆ. ಇಬ್ಬರು ಸ್ನೇಹಿತೆಯಾಗಿದ್ದರು.ಭಾನುವಾರದಂದು ಇಬ್ಬರಿಗೂ ಹೊಟ್ಟೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ.