ನ್ಯೂಸ್ ನಾಟೌಟ್ : ಮುಸ್ಲಿಂ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆಂದು ಆರೋಪಿಸಿ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ವಿಟ್ಲದ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದ್ದು,ವಿಶೇಷವಾದ ತಂಡ ರಚಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಯನ್ನು ಕನ್ಯಾನದ ಅಬೂಬಕ್ಕರ್( 46) ಎನ್ನಲಾಗಿದೆ.
ಹುಡುಗಿಯೊಬ್ಬಳು ತನ್ನ ಮನೆಗೆ ಒಬ್ಬಂಟಿಯಾಗಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಮಯಕ್ಕೆ ಅನ್ಯಕೋಮಿನ ವ್ಯಕ್ತಿ ಅದೇ ದಾರಿಯಿಂದ ಬಂದಿದ್ದಾನೆ. ಈ ವೇಳೆ ಆಕೆ ಜತೆ ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿ ಕಡಂಬುಗೆ ಹೋಗುವ ದಾರಿ ಯಾವುದು ಎಂದು ಕೇಳಿದ್ದಾನೆ.ಮಾತ್ರವಲ್ಲ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು,ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.ಈ ಬಗ್ಗೆ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡರು.ಸಿಸಿ ಕ್ಯಾಮಾರಾ ಮೂಲಕ ಆರೋಪಿಯನ್ನು ಪತ್ತೆ ಹಚ್ಚಲಾಯಿತು.