ನ್ಯೂಸ್ ನಾಟೌಟ್: ಮಾಣಿಯಲ್ಲಿ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಗಂಭೀರ ಗಾಯಗೊಂಡ ಮಹೇಂದ್ರ ಅವರನ್ನು ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಮಂಗಳೂರಿನ ಎಜೆ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು.ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದರು. ಹಲ್ಲೆ ವಿಚಾರ ತಿಳಿದು ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ರಾಜೇಶ್ ನಾಯ್ಕ್ ಕಾರ್ಯಕರ್ತರ ಆರೋಗ್ಯ ವಿಚಾರಿಸಿದರು.
ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರವಾಗಿ ದಾಳಿ ನಡೆದಿದ್ದು, ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ಹಲ್ಲೆ ನಡೆಸಲಾಗಿತ್ತು. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಹಲ್ಲೆ ನಡೆದಿತ್ತು. ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ನಡೆಸಿತ್ತು.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.