ನ್ಯೂಸ್ ನಾಟೌಟ್: ವೇಣೂರು-ಮೂಡುಬಿದಿರೆ ರಾಜ್ಯ ಹೆದ್ದಾರಿಯ ಪೆರಿಂಜೆ ಬಂಡಸಾಲೆ ಬಳಿ ಸೋಮವಾರ ನಡೆದ ಕಾರು ಮತ್ತು ಆಟೋರಿಕ್ಷಾ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಕಳಿಯ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಮಹಮ್ಮದ್ ಇಸಾಮ್ (11) ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾನೆ.
ವೇಣೂರು ಕಡೆಗೆ ಬರುತ್ತಿದ್ದ ಆಟೋರಿಕ್ಷಾಗೆ ಕಾರು ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಆಟೋ ರಿಕ್ಷಾ ಪಲ್ಟಿಯಾಗಿ ಜಖಂಗೊಂಡಿತ್ತು. ರಿಕ್ಷಾ ಚಾಲಕ ಮತ್ತು ಅದರಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಮತ್ತು ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಮ್ಮದ್ ಇಸಾಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಉಳಿದ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ.