ನ್ಯೂಸ್ ನಾಟೌಟ್: ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರು ದಾಳಿ ನಡೆದಿದೆ.
ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ. ಮೂಲಗಳ ಪ್ರಕಾರ ಕಾಲು ಮತ್ತು ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದೆ.
ಮಾರಣಾಂತಿಕ ಹಲ್ಲೆಗೊಳಗಾದ ಇಬ್ಬರು ಯುವಕರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಣಿ ಜಂಕ್ಷನ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಕೃತ್ಯ ಎಸಗಿದೆ.
ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ತಂಡ ದಾಳಿ ನಡೆಸಿರುವ ಮಾಹಿತಿ ದೊರೆತಿದ್ದು, ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಎಂಬ ಶಂಕೆ ವ್ಯಕ್ತವಾಗಿದೆ.