ನ್ಯೂಸ್ ನಾಟೌಟ್ : ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್ ಇನ್ನೂ ಹತ್ತು ಹಲವು ಭರವಸೆಗಳನ್ನು ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ.ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಎಂದಿರುವುದು ವ್ಯಾಪಕ ಚರ್ಚೆಗೂ ಕಾರಣವಾಗಿದೆ.ಈ ಮಧ್ಯೆ ಕಾಂಗ್ರೆಸ್ ವಿರುದ್ಧ ಸವಾಲು ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಿಮಗೆ ತಾಕತ್ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾದ ಶೋಭಾ ಕರಂದ್ಲಾಜೆ ಕಾಂಗ್ರೆಸ್ನ ವಿನಾಶ ಕಾಲ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡ್ತೀವಿ. ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.
ಇವತ್ತು ಭಜರಂಗದಳ ಮತ್ತು ಪಿಎಫ್ಐ ಎರಡನ್ನೂ ಒಂದೇ ತಕ್ಕಡಿಯಲ್ಲಿಟ್ಟಿದೆ ಕಾಂಗ್ರೆಸ್. ದೇಶದ್ರೋಹಿ ಪಿಎಫ್ಐ ಜತೆ ದೇಶಪ್ರೇಮಿ ಭಜರಂಗದಳ ಹೋಲಿಸಿರೋದು ಸರಿಯಲ್ಲ. ಆರ್ಎಸ್ಎಸ್ನ ಒಂದು ಭಾಗ ಬಿಜೆಪಿ. ಆರ್ಎಸ್ಎಸ್ನ ಯುವಕರ ದಳ ಭಜರಂಗದಳ. ನಿಮಗೆ ತಾಕತ್ ಇದ್ದರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಸವಾಲು ಹಾಕಿದ್ದಾರೆ. ನಾನೂ ಭಜರಂಗದಳದ ಕಾರ್ಯಕರ್ತೆ. ತಾಕತ್ ಇದ್ರೆ ನನ್ನನ್ನೂ ಅರೆಸ್ಟ್ ಮಾಡಿ ಎಂದು ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಕಿಡಿಕಾರಿದರು.