ನ್ಯೂಸ್ ನಾಟೌಟ್: ಬಿಜೆಪಿ ವಿಧಾನಸಭಾ ಚುನಾವಣೆಯ ಪ್ರಜಾ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಸೋಮವಾರ ಬಿಡುಗಡೆಗೊಳಿಸಿದರು.ಜನರ ಹಿತದೃಷ್ಟಿಯನ್ನಿಕೊಟ್ಟುಕೊಂಡು ಪ್ರಣಾಳಿಕೆ ತಯಾರಿಸಿದ್ದೇವೆ. ಪ್ರಣಾಳಿಕೆ ರಾಜ್ಯ ಸರ್ಕಾರ ನಡೆಯುವ ದಿಕ್ಕನ್ನು ತೋರಿಸುತ್ತದೆ. ಸುಮಾರು 2 ವರ್ಷ ಕೊರೊನಾದಿಂದ ಆರ್ಥಿಕ ಕುಸಿತ ಆಯಿತು. ಪ್ರಣಾಳಿಕೆಯಲ್ಲಿ ಕೃಷಿಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಈಗಾಗಲೇ ಬಜೆಟ್ನಲ್ಲೂ ಕೃಷಿಗೂ ಹೆಚ್ಚು ಆದ್ಯತೆ ನೀಡಿದ್ದೇವೆ. ಸಿರಿಧಾನ್ಯಗಳ ಉತ್ಪಾದನೆ, ಮೀನುಗಾರಿಕೆ ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಡಿ.ವಿ ಸದಾನಂದಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.
ಪ್ರತಿ ತಿಂಗಳು 5 ಕೆಜಿ ಅಕ್ಕಿ ಸೇರಿ ಸಿರಿಧಾನ್ಯ ಒಳಗೊಂಡ ಪಡಿತರ ಕಿಟ್
ಪೋಷಣೆ ಯೋಜನೆಯಡಿ ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ಹಾಲು
ಮೀನುಗಾರಿಕೆ ಉತ್ಪಾದನೆಗೆ ಆದ್ಯತೆ
ಅಟಲ್ ಆಹಾರ ಕೇಂದ್ರ ಸ್ಥಾಪನೆ
ಅಪಾರ್ಟ್ಮೆಂಟ್ ಓನರ್ಶಿಪ್ ಆ್ಯಕ್ಟ್ ತಿದ್ದುಪಡಿ
ಬಿಪಿಎಲ್ ಕುಟುಂಬಗಳಿಗೆ ಯುಗಾದಿ, ಗಣೇಶ ಮತ್ತು ದೀಪಾವಳಿ ಹಬ್ಬಕ್ಕೆ ಮೂರು ಎಲ್ಪಿಜಿ ಸಿಲಿಂಡರ್ ಉಚಿತ
ಏಕರೂಪ ನಾಗರಿಕ ಸಂಹಿತೆ ಜಾರಿ ಭರವಸೆ
ಸರ್ವರಿಗೂ ಸೂರು ಯೋಜನೆಯಡಿ ಹತ್ತು ಲಕ್ಷ ವಸತಿ ನಿವೇಶನ
ಒಂದು ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಆರ್ಥಿಕ ನೆರವು ವಿತರಣೆ
ಬಹುಮಹಡಿ ವಸತಿ ಯೋಜನೆಯಡಿ 5 ಲಕ್ಷ ಮನೆ ನಿರ್ಮಾಣ
ಪ್ರತಿ ವಾರ್ಡ್ನಲ್ಲಿಯೂ ಅಟಲ್ ಆಹಾರ ಕೇಂದ್ರ ಸ್ಥಾಪನೆ