ನ್ಯೂಸ್ ನಾಟೌಟ್ : ಕಾಂಗ್ರೆಸ್ ನ ೫ ಗ್ಯಾರಂಟಿಗಳಲ್ಲಿ ಈಗಾಗಲೇ ಉಚಿತ ಬಸ್ ಪ್ರಯಾಣ ಘೋಷಣೆಯಾಗಿದ್ದು, ಉಳಿದ ಗ್ಯಾರಂಟಿಗಳ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸರ್ಕಾರ ಅಂತಿಮ ನಿರ್ಧಾರವನ್ನ ತೆಗೆದುಕೊಳ್ಳಲಿದೆ ಎನ್ನಲಾಗಿದೆ. ಇದೀಗ ದ.ಕ ಮತ್ತು ಉಡುಪಿಯಲ್ಲಿ ಖಾಸಗಿ ಬಸ್ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳಿಗೆ ಸಾರಿಗೆ ಸಂಪರ್ಕ ಲಭ್ಯವಾಗುವುದು ಖಾಸಗಿ ಬಸ್ ಗಳ ಮೂಲಕ ಸಂಚರಿಸುತ್ತಾರೆ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ನೀಡುವ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಇದರಿಂದ ಈ ಭಾಗದ ಜನರಿಗೆ ಅನ್ಯಾಯವಾಗಲಿದ್ದು, ಸರ್ಕಾರ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷವು ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಗ್ಯಾರಂಟಿ ನೀಡಿದೆ. ಆದರೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಹೆಚ್ಚಾಗಿ ಖಾಸಗಿ ಬಸ್ಗಳನ್ನು ಅವಲಂಬಿಸಿರುವುದರಿಂದ ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್ಗಳಲ್ಲಿಯೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.