ನ್ಯೂಸ್ ನಾಟೌಟ್ : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಸಿದೆ. ರಾಜ್ಯದ ಮುಖ್ಯಮಂತ್ರಿಯಾಗಲು ಶಿವಕುಮಾರ್ ಅವರಿಗೆ ಒಂದು ಅವಕಾಶ ಮಾಡಿಕೊಡಬೇಕು ಅವರು ಅದಕ್ಕೆ ಅರ್ಹರು ಎಂದು ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪರೆಡ್ಡಿ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ನಂಜಾವದೂತ ಶ್ರಿಗಳು ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯನವರಿಗೆ ಒಮ್ಮೆ ಅಧಿಕಾರ ದೊರಕಿದೆ ಆಗ ಎಲ್ಲರನ್ನೂ ಒಂದಾಗಿಸಿಕೊಂಡು ಉತ್ತಮ ಆಡಳಿತ ನೀಡಿದ್ದಾರೆ ಆದರೆ, ಡಿ.ಕೆ ಶಿವಕುಮಾರ್ ಅವರು ಹೋರಾಟ ಮಾಡಿದ್ದು ಮಾತ್ರವಲ್ಲದೆ ಅಮೋಘ ಬಹುಮತದಿಂದ ಗೆದ್ದರು ಕೂಡ ಹಲವು ತ್ಯಾಗ ಮಾಡಿದ್ದಾರೆ ಅದಕ್ಕೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರು ಎಂದು ಆದಿಚುಂಚನಗಿರಿ ಮಠದ ನಂಜಾವದೂತ ಶ್ರಿಗಳು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರಾದವರು ಮುಖ್ಯಮಂತ್ರಿ ಆಗುವ ಸಂಪ್ರದಾಯ ಕಾಂಗ್ರೆಸ್ ನಲ್ಲಿದೆ. ಸಂಪ್ರದಾಯದಂತೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಅವರು ಹೇಳಿದರು.
ಕಾಂಗ್ರೆಸ್ ಪ್ರಚಂಡ ಬಹುಮತ ಗಳಿಸಲು ಕೆಪಿಸಿಸಿ ಅಧ್ಯಕ್ಷರಾಗಿ ಅವರು ಶ್ರಮಪಟ್ಟಿದ್ದಾರೆ. ಪಕ್ಷಕ್ಕಾಗಿ ತ್ಯಾಗ ಮಾಡಿದ್ದಾರೆ. ಶ್ರಮಪಟ್ಟವರಿಗೆ ಅಧಿಕಾರ ಸಿಗಬೇಕು ಎಂಬುದು ಸಂಘದ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸಮುದಾಯದ ಮನವಿಯಾಗಿದೆ. ರೈತ ಕಷ್ಟಪಟ್ಟು ಬೆಳೆ ಬೆಳೆಸಿ ಫಸಲು ತೆಗದಂತೆಯೇ ಶಿವಕುಮಾರ್ ಕಷ್ಟಪಟ್ಟು ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿದ್ದಾರೆ ಎಂದು ಒಕ್ಕಲಿಗ ಸಂಘದ ಪ್ರಧಾನ ಕಾರ್ಯದರ್ಶಿ ತಿಳಿಸಿದರು.
ಕೆಂಪೇಗೌಡ ಆಸ್ಪತ್ರೆ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎಂ.ಎಸ್.ಉಮಾಪತಿ ಶ್ರೀನಿವಾಸಗೌಡ ಮಾತನಾಡಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸಂಪೂರ್ಣ ಬಹುಮತ ಬಂದಿದೆ. ಇಲ್ಲಿವರೆಗೂ ಒಕ್ಕಲಿಗ ಸಮುದಾಯದ ನಡೆಸಿದ ಹೋರಾಟಗಳು ಯಶಸ್ವಿಯಾಗಿವೆ ಎಂದರು.
ನಮ್ಮ ಕುಲಕ್ಕೆ ಆದಿಚುಂಚನಗಿರಿ ಮಠ ಕಲಶವಿದ್ದಂತೆ. ದೇವಾಲಯವಿದ್ದಂತೆ ಡಿಕೆಶಿ ಅವರಿಗೆ ಮುಖ್ಯಮಂತ್ರಿಯಾಗಲು ಒಂದು ಅವಕಾಶ ಸಿಗಲೇಬೇಕು ಎಂಬ ಉದ್ದೇಶದಿಂದ ಅವರಿಗೆ ಬೆಂಬಲವಾಗಿ ಒಕ್ಕಲಿಗರ ಸಂಘ ಮತ್ತು ಸಮುದಾಯವಿದೆ. ಪಕ್ಷಕ್ಕಾಗಿ ಶಿವಕುಮಾರ್ ದುಡಿಮೆ ಇದೆ ಎಂದಿದ್ದಾರೆ.